ಅಧಿಕಾರಗಳನ್ನು ಅಮಾನತ್ತುಪಡಿಸಲು ಆಗ್ರಹ

Published on

ಚಾಮರಾಜನಗರ: ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಪರಭಾರೆ ಮಾಡಿ ಅಲಿನೇಷನ್ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಂಡು, ಅವರನ್ನು ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿಸಂರಕ್ಷಣಾ ಸಮಿತಿ ಕಾರ್ಯದರ್ಶಿ ಅಯ್ಯನಪುರ ಶಿವಕುಮಾರ್ ಒತ್ತಾಯಿಸಿದರು.

ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಮನವಿಯಂತೆ ಸಂಘದ ಆಸ್ತಿ ಪರಭಾರೆ ಮಾಡಿಕೊಂಡು, ಅಲಿನೇಷನ್ ಮಾಡಿಕೊಂಡಿದ್ದ ಚಾ.ಸಿ.ಗೋವಿಂದರಾಜು ಅವರ ಅಲಿನೇಷನ್ ರದ್ದು ಪಡಿಸಿರುವುದು ಸ್ವಾಗತಾರ್ಹ. ಆದರೆ ಕೂಡಲೇ ಆಸ್ತಿ ಪರಭಾರೆ ಮಾಡಿದ ಗ್ರಾಮ ಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕ, ತಹಸೀಲ್ದಾರ್, ಚೂಡಾಧಿಕಾರಿ ಹಾಗೂ ನಗರಸಭಾ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕೈಗೊಂಡು ಅವರನ್ನು ಸೇವೆಯಿಂದ ಅಮಾನತ್ತು ಪಡಿಸಬೇಕು ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಸಂಘದ ನಿರ್ದೇಶಕ ಎಸ್.ಮಹದೇವಯ್ಯ ಅವರು ಕ್ರಿಮಿನಲ್ ಪಿನ್ ಆಗಿದ್ದು, ಅಂಘದ ಅಕ್ರಮಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ಜಿಲ್ಲಾ ಎಸ್ಸಿ/ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಸಂಘ ಆಸ್ತಿ ವಿಚಾರವಾಗಿ ಪ್ರಕರಣ ದಾಖಲು ಮಾಡಿರುವ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಎಸ್ಸಿ/ಎಸ್ಟಿ ಮೊಕದ್ದಮೆ ದಾಖಲು ಮಾಡುವುದಾಗಿ ಧಮಕಿ ಹಾಕಿರುವ ಸಿ.ಕೆ.ರವಿಕುಮಾರ್, ಸಿ.ಕೆ.ಮಂಜುನಾಥ್ ಹಾಗೂ ಇತರರ ವಿರುದ್ದ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು. ಜೈ ಭೀಮ್ ಬಿಜಿನೆಸ್ ಸೌಹಾರ್ದ ಸಹಕಾರ ಸಂಘಕ್ಕೆ ಮಾಡಿಕೊಟ್ಟಿರುವ ಭೋಗ್ಯ ಕರಾರನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಆರ್.ಮಹದೇವು, ಮಾಜಿ ಸದಸ್ಯ ನಲ್ಲೂರುಸೋಮೇಶ್ವರ್, ಮುಖಂಡರಾದ ಚನ್ನಂಜಯ್ಯ, ಗೋವಿಂದರಾಜು, ನಾಗಯ್ಯ, ಸೋಮಣ್ಣ, ರಂಗಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net