ಜ್ಯೋತಿ ರಥಯಾತ್ರೆಗೆ ಬೀಳ್ಕೊಡುಗೆ

29rajesh11
Published on

ಚಾಮರಾಜನಗರ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿ ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಕ್ಕೆ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಬೀಳ್ಕೊಟ್ಟರು.

ಕನ್ನಡ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯು ಜಿಲ್ಲೆಯಲ್ಲಿ 4 ದಿನಗಳ ಕಾಲ ಸಂಚರಿಸುತ್ತಿದ್ದು, ಚಾಮರಾಜನಗರ ತಾಲೂಕಿನಿಂದ ಗುಂಡ್ಲುಪೇಟೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕನ್ನಡ ಬಾವುಟ ತೋರುವ ಮೂಲಕ ರಥಯಾತ್ರೆಗೆ ಬೀಳ್ಕೊಡುಗೆ ನೀಡಿದರು.

ಇದೇ ವೇಳೆ ಮಾತನಾಡಿದ ಅವರು, ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಂದ ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ -50 ಜ್ಯೋತಿ ರಥಯಾತ್ರೆ ಆರಂಭಿಸಿದೆ. ನಾವೆಲ್ಲ ಕನ್ನಡಿಗರು. ಕನ್ನಡ ಭಾಷೆ, ನೆಲ, ಜಲ ಉಳಿಸಿ, ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲರಿಗೂ ಕರ್ನಾಟಕ ಸಂಭ್ರಮದ ಶುಭಾಶಯ ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಸೀಲ್ದಾರ್ ಗಿರಿಜಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಋಗ್ವೇದಿ, ಕಂದಾಯ ಇಲಾಖೆಯ ಮಹೇಶ್, ರಾಜೇಶ್, ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net