ಜೂಜಾಡುತ್ತಿದ್ದ ಜನರ ಬಂಧನ

Crime Logo
Published on

ಚಾಮರಾಜನಗರ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಜೂಜಾಟವಾಡುತ್ತಿದ್ದ 20 ಜನರನ್ನು ಪೊಲೀಸರು ಬಂಧಿಸಿ 28,820 ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆ.24ರಂದು ಸಂಜೆ 5 ಗಂಟೆಯ ವೇಳೆಗೆ ಇಸ್ಪೀಟ್ ಜೂಜಾಟವಾಡುತ್ತಿದ್ದ 7 ಜನರನ್ನು ಬಂಧಿಸಿ 6,670 ರೂ. ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮರಾಜಿಪುರ-ಜಕ್ಕಳ್ಳಿ ರಸ್ತೆಯ ಜಮೀನಿನ ಮುಂಭಾಗ ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಆ.25ರಂದು ಸಂಜೆ 6.15ರ ಸಮಯದಲ್ಲಿ ಇಸ್ಪೀಟ್ ಜೂಜಾಟವಾಡುತ್ತಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದು, ಪಣಕ್ಕಿಟ್ಟಿದ್ದ 22,150 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net