ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲು

Crime Logo
Published on

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಮದ್ಯ ಮಾರಾಟ, ಸಾಗಾಣಿಕೆ ಮಾಡುತ್ತಿದ್ದ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.

ಆ.25ರಂದು ಸಂಜೆ 4.15 ಗಂಟೆ ವೇಳೆಯಲ್ಲಿ ರಾಮಾಪುರ ಪಿ.ಬಿ ದೊಡ್ಡಿ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯದ ಪೌಚ್ ಗಳನ್ನು ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಮಹಿಳೆಯೋರ್ವರಿಂದ 719.46 ರೂ. ಮೌಲ್ಯದ ಮದ್ಯದ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆ.25ರಂದು ರಾತ್ರಿ 7 ಗಂಟೆ ಸಮಯದಲ್ಲಿ ಹನೂರು ಪಟ್ಟಣದಲ್ಲಿ ಮನೆಯ ಮುಂಭಾಗವೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ 10 ಮದ್ಯವ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.


ಆ. 25ರಂದು ಮಧ್ಯಾಹ್ನ 3.40 ಗಂಟೆ ಸಮಯದಲ್ಲಿ ಯಳಂದೂರು ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 719.46 ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ 760 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.


ಕುದೇರು ಪೊಲೀಸ್ ಠಾಣಾ ವ್ಯಾಪ್ತಿಯ ಗಣಗನೂರು ಗ್ರಾಮದ ಪ್ರಾವಿಷನ್ ಸ್ಟೋರ್ ಬಳಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ 4,116 ರೂ. ಗಳ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಸ್ವಾಮಿ. ಎನ್. ಹಾಗೂ ಟಿ. ನರಸೀಪುರ ಪಟ್ಟಣದ ರಾಜು ಬಾರ್ ಮತ್ತು ವೈನ್ಸ್ ನ ಮಾಲೀಕರ ವಿರುದ್ದ ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net