ಸಫಾಯಿ ಕರ್ಮಚಾರಿಗಳಿಂದ ಡಿಸಿಗೆ ಸನ್ಮಾನ

04rajesh6
Published on

ಚಾಮರಾಜನಗರ: ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿಯ ನೂತನ ಸದಸ್ಯರು, ಮೈಸೂರು ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಬುಧವಾರ ಸನ್ಮಾನಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕರಿ ಕಚೇರಿಯಲ್ಲಿ ಸನ್ಮಾನಿಸಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಮಾತನಾಡಿ, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ವಸತಿ ಸೌಕರ್ಯ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ವಸತಿ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ ಕುಟುಂಬದವನ್ನು ಗುರುತಿಸಿ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ನೂತನ ಸದಸ್ಯ ಹೊನ್ನೂರು ಆರ್ಮುಗಂ, ಕುಮಾರ್, ತಂಗಮ್ಮ, ಶಶಿಕಲಾ, ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ಯುವಕರ ಮಹಾಸಂಘದ ಅಧ್ಯಕ್ಷ ಶ್ರೀನಿವಾಸ್, ಸಲಹಾ ಸಮಿತಿ ಅಧ್ಯಕ್ಷ ಸಿ.ಆರ್.ವಿಜಯ, ಎಸ್.ಪಿ.ಮಹದೇವ, ಕಾರ್ಯಾಧ್ಯಕ್ಷ ಕುಮಾರಸ್ವಾಮಿ, ರಾಜ್ಯ ಖಜಾಂಚಿ ರಾಜಣ್ಣ, ಕಾರ್ಯದರ್ಶಿ ಕೃಷ್ಣ ಬಹದ್ದೂರ್, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಳನಿ, ಜಿಲ್ಲಾ ಉಸ್ತುವಾರಿ ಸದಸ್ಯರಾದ ನಾಗರಾಜು, ಮಾದಾಪುರ ರಂಗಸ್ವಾಮಿ, ಮೇಗಲಹುಂಡಿ ಮಾದೇವ, ಮಾಂಬಳ್ಳಿ ಸುರೇಶ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net