

ಕೊಳ್ಳೇಗಾಲ: ಪಟ್ಟಣದ ವಿಸ್ಡಂ ಸಿಬಿಎಸ್‌ಇ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಸಿಬಿಎಸ್‌ಇ ಶಾಲೆಗಳ ಕ್ರೀಡಾಕೂಟದಲ್ಲಿ ಆತಿಥ್ಯವನ್ನು ವಹಿಸಿದ್ದ ವಿಸ್ಡಂ ಶಾಲೆ ಎರಡನೇ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವಿಸ್ಡಂ ಸಿಬಿಎಸ್‌ಇ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಪಿ.ವಿ.ವರ್ಷ ಅವರು ಚಾಲನೆ ನೀಡಿದ್ದರು. ಈ ಕ್ರೀಡಾಕೂಟದಲ್ಲಿ ವಿಸ್ಡಂ ಶಾಲೆ ಎರಡನೇ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದು, ವೈಯಕ್ತಿಕವಾಗಿ ಮಲ್ಲಿಕಾರ್ಜುನ್ ಎಂಬ ವಿದ್ಯಾರ್ಥಿ ಶಾಲೆಗೆ ಕೀರ್ತಿ ತಂದಿರುತ್ತಾನೆ.
ಶಾಲೆಯ ಎಲ್ಲಾ ಕ್ರೀಡಾಪಟುಗಳಿಗೆ ವಿಸ್ಡಂ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.