ಚಿರತೆ ದಾಳಿಗೆ ಕರು ಬಲಿ

3299a3c2-3bfa-49ad-9a88-788ff4623fab
Published on

ಚಾಮರಾಜನಗರ: ತಾಲೂಕಿನ ಕಿಲಗೆರೆ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಚಿರತೆ ದಾಳಿಗೆ ಕರುವೊಂದು ಬಲಿಯಾಗಿದೆ.

ಗ್ರಾಮದ ರೈತ ಸ್ವಾಮಿ ಎಂಬುವವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಚಿರತೆ ಎಳೆದೊಯ್ದು ಕೊಂದು ಹಾಕಿದೆ. ಇದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಗ್ರಾಮದ ಸಮೀಪವೆ ಚಿರತೆ ಬಂದಿರುವುದರಿಂದ ಜನರು ಸಂಜೆಯ ವೇಳೆ ಓಡಾಡಲು ಎದುರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಬೋನು ಇಟ್ಟು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net