ಮನೆಗಳ್ಳನಿಗೆ 7 ವರ್ಷ ಕಠಿಣ ಶಿಕ್ಷೆ

Crime Logo
Published on

ಚಾಮರಾಜನಗರ: ಎರಡು ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗೆ 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಎಸ್ ಹೊನ್ನಸ್ವಾಮಿ ಅವರು ತೀರ್ಪು ನೀಡಿದ್ದಾರೆ.

ಚಾ.ನಗರದ 4ನೇ ವಾರ್ಡ್ ರಫೀಕ್ (42) ಶಿಕ್ಷೆಗೊಳಗಾದ ಅಪರಾಧಿ. ಈತ 2014ರ ಅ.16 ರಂದು ಚಾ.ನಗರ ರೆಹಮತ್ ನಗರದ ನಿಸಾರ್ ಮೆಹದಿ ಅವರು ಮಗನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ತೆರಳಿದ್ದರು. ಈ ಬಗ್ಗೆ ತಿಳಿದ ರಫೀಕ್ ಮನೆ ಬಾಗಿಲನ್ನು ಒಡೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 29.67 ಗ್ರಾಂ. ಚಿನ್ನಾಭರಣ ಕಳ್ಳತನ ಮಾಡಿದ್ದರು. ಈ ಸಂಬಂಧ ಚಾ.ನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಇನ್‌ಸ್ಪೆಕ್ಟರ್ ಶ್ರೀಕಾಂತ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಪ್ರಕರಣ 2: ಮತ್ತೊಂದು ಪ್ರಕರಣದಲ್ಲಿ 2015, ನ.13 ರಂದು ಮಧ್ಯಾಹ್ನ ಗಾಳಿಪುರದಲ್ಲಿ ತೌಫಿಕ್ ಖಾನ್ ಎಂಬುವರು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಮನೆ ಬಾಗಿಲು ಮುರಿದು ಬೀರುವಿನಲ್ಲಿದ್ದ 52.29 ಗ್ರಾಂ.ಚಿನ್ನದ ಒಡವೆಗಳು, ಹಣವನ್ನು ಕಳ್ಳತನ ಮಾಡಿದ್ದ. ಈ ಸಂಬಂಧವೂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು.ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ರಫೀಕ್‌ಗೆ ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರಿ ಸಹಾಯಕ ಅಭಿಯೋಜಕ ಎ.ಸಿ ಮಹೇಶ್ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net