ಸೆ.11ರಂದು ನಗರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

Published on

ಚಾಮರಾಜನಗರ: ಅರಣ್ಯ ಇಲಾಖೆ ವತಿಯಿಂದ ಸೆ.11ರಂದು ಬೆಳಗ್ಗೆ 9 ಗಂಟೆಗೆ ಅರಣ್ಯ ಹುತಾತ್ಮರ ದಿನಾಚರಣೆಯನ್ನು ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅರಣ್ಯ ಸಂಪತ್ತನ್ನ ಕಳ್ಳಕಾಕರಿಂದ ರಕ್ಷಿಸುವ ಸಂದರ್ಭದಲ್ಲಿ ಕೆಚ್ಚೆದೆಯಿಂದ ಹೋರಾಡಿ ವೀರ ಮರಣವನ್ನಪ್ಪಿದ ದಿವಂಗತರ ನೆನಪಿಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಆಚರಿಸಲಾಗುತ್ತಿದೆ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net