

ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸುತ್ತಿದ್ದು, ಇದರ ಅಂಗವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪೇಟೆ ಪ್ರೈಮರಿ) ಆವರಣದಲ್ಲಿ ಆಯೋಜಿಸಲಾಗಿದೆ.
ವಯೋಮಿತಿ ಆಧಾರದ ಮೇಲೆ ಎರಡು ವಿಭಾಗಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ಏರ್ಪಡಿಸಲಾಗಿದೆ. 60 ರಿಂದ 70 ವರ್ಷದವರಿಗೆ ಮ್ಯೂಸಿಕಲ್ ಚೇರ್ ಮತ್ತು 60 ರಿಂದ 70 ವರ್ಷ ಮೇಲ್ಪಟ್ಟವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ನಡೆಸಲಾಗುವುದು.
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ, ಜಿಲ್ಲಾಮಟ್ಟದ ಹಿರಿಯ ನಾಗರಿಕರ ದಿನಾಚರಣೆಯಂದು ಸನ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226-223688 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.