

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗಾಗಿ ಸೆಪ್ಟೆಂಬರ್ 14ರೊಳಗಾಗಿ ನಿಗದಿತ ಅರ್ಜಿಗಳನ್ನು ಪಡೆದು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ 08226-224932, 9844160841 ಅನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.