

ಚಾಮರಾಜನಗರ: ರಾಜ್ಯದಲ್ಲಿ ವಿವಿಧ ಹಗರಣಗಳಲ್ಲಿ ಕಾಂಗ್ರೆಸ್, ಬಿಜೆಪಿ ಜೆಡಿಎಸ್ ಪಕ್ಷಗಳ ನಾಯಕರು ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿ ಹೇಳಿದರು.
ನಗರದ ಖಾಸಗಿ ಸಭಾಂಗಣದಲ್ಲಿ ಎಸ್‌ಡಿಪಿಐ ವತಿಯಿಂದ ಗುರುವಾರ ಆಯೋಜಿಸಿದ್ದ ಪಕ್ಷದ ‘ನಾಯಕರ ಸಭೆ’ ಯನ್ನು ಉದ್ಘಾಟಿಸಿ ಅವರು ಮಾತನಾಡಿದದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹಗರಣದಲ್ಲಿ ಕೇಳಿ ಬಂದಿರುವುದು ಗಮನಿಸಿದರೆ ರಾಜ್ಯ ರಾಜಕಾರಣ ಸಮಾಜದ ಪರ ಇಲ್ಲ ಎಂದು ಸಾಬೀತಾಗಿದೆ. ಇಂತಹ ಭ್ರಷ್ಟ ರಾಜಕೀಯ ವ್ಯವಸ್ಥೆಯಲ್ಲಿ ನಮ್ಮ ಜನ, ನಮ್ಮ ಸಮಾಜ ಸಿಕ್ಕಿ ಸಿಲುಕಿ ವಿಲಿವಿಲಿ ಎಂದು ಒದ್ದಾಡುತ್ತಿದೆ ಎಂದರು.
ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್ ಮಾತನಾಡಿ, ಜಿಲ್ಲೆಯಾದ್ಯಂತ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೊ ಪಕ್ಷ ಸಂಘಟಿಸಲು ನಾಯಕರಿಗೆ ಕರೆ ನೀಡಿದರು. ಅಲ್ಲದೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ಮಾಡ ಬೇಕಾಗಿದೆ ಇದು ಅನಿವಾರ್ಯ ಎಂದು ಹೇಳಿದರು. ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರ್ೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಹಾಗೂ ಕಲೀಲ್‌ವುಲ್ಲಾ, ಜಿಲ್ಲಾ ಸಂಘಟನ ಕಾರ್ಯದರ್ಶಿ ಸೈಯದ್ ಇರ್ಫಾನ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ನಗರಸಭಾ ಸದಸ್ಯರಾದ ಮೊಹಮ್ಮದ್ ಅಮೀಕ್, ಆಫ್ಸರ್ ಪಾಷ ಹಾಜರಿದ್ದರು.