ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಸಿಬಿಎಸ್‌ಇ ಶಾಲೆಗಳ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಸೇವಾಭಾರತಿ ಸಿಬಿಎಸ್‌ಇ ಶಾಲೆಯು ಸತತವಾಗಿ 4 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಪ್ರಶಂಸಿಸಿ ಮಂಗಳವಾರ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಮಟ್ಟದ ಸಿಬಿಎಸ್‌ಇ ಶಾಲೆಗಳ ಕ್ರೀಡಾಕೂಟದಲ್ಲಿ 11 ಶಾಲೆಗಳು ಭಾಗವಹಿಸಿದ್ದವು. ಸೇವಾ ಭಾರತಿ ಪಬ್ಲಿಕ್ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಈ ಸಂದರ್ಭದಲ್ಲಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರಮೇಶ್, ಖಜಾಂಚಿ ಮಧು(ಮಂಜುನಾಥ್), ಆಡಳಿತ ಮಂಡಳಿ ಸದಸ್ಯ ಬಾಲಸುಬ್ರಮಣ್ಯ, ರಾ.ಸತೀಶ್, ವೆಂಕಟನಾಗಪ್ಪಶೆಟ್ಟಿ, ಸೇವಾ ಭಾರತಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ರಾಧಿಕಾ ಗುಪ್ತಾ, ಮುಖ್ಯಶಿಕ್ಷಕ ಮಂಜು, ಕೆ.ನಿರ್ಮಲಾ, ದೈಹಿಕ ಶಿಕ್ಷಣ ಶಿಕ್ಷಕ ಬಾಲು, ಬಸವಣ್ಣ, ರೇಖಾ ಇತರರು ಇದ್ದರು.