

ಚಾಮರಾಜನಗರ: ಈ ಬಾರಿಯ ಚಾಮರಾಜನಗರ ದಸರಾ ಮಹೋತ್ಸವವನ್ನು ಅ.7 ರಿಂದ 9ರವರೆಗೆ ಆಯೋಜಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಬಯಸುವ ಕಲಾವಿದರು, ಕಲಾತಂಡಗಳು, ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು, ಚಿತ್ರಸಂತೆಯಲ್ಲಿ ಭಾಗವಹಿಸುವ ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲಾಡಳಿತ ಭವನದ (ಜಿಲ್ಲಾಧಿಕಾರಿಗಳ ಕಚೇರಿ) ಮೊದಲನೇ ಮಹಡಿಯ ಕೊಠಡಿ ಸಂಖ್ಯೆ-104ರಲ್ಲಿ ಹಾಗೂ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ (ಜಿಲ್ಲಾಧಿಕಾರಿಗಳ ಕಚೇರಿ) ಮೊದಲನೇ ಮಹಡಿಯ ಕೊಠಡಿ ಸಂಖ್ಯೆ-104ಕ್ಕೆ ಸೆ. 12ರೊಳಗೆ ಸಲ್ಲಿಸಬೇಕು. ಆನ್‌ಲೈನ್ ಮೂಲಕವು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.