

ಚಾಮರಾಜನಗರ: ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಹೊರ ವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ 9 ಜನರನ್ನು ಬಂಧಿಸಿ ಪಣಕ್ಕಿಟ್ಟಿದ 15,730 ರೂ. ಗಳನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆ.1 ರಂದು ರಾಮಾಪುರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಎಂ.ಎನ್.ಈಶ್ವರ್ ಅವರಿಗೆ ದೊರೆತ ಮಾಹಿತಿ ಮೇರೆಗೆ 9 ಜನರನ್ನು ಬಂಧಿಸಿ ಪಣಕ್ಕಿಟ್ಟಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.