ಬೆಳೆಹಾನಿ ವಿವರ ಪ್ರಕಟ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Published on

ಚಾಮರಾಜನಗರ: 2024ನೇ ಸಾಲಿನ ಮುಂಗಾರಿನ ಅವಧಿಯಲ್ಲಿ (ದಿನಾಂಕ: 1.06.2024 ರಿಂದ 31.08.2024) ಅತಿವೃಷ್ಠಿಯಿಂದ ಜಿಲ್ಲೆಯಾದ್ಯಂತ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ಪಾವತಿ ಮಾಡುವ ಸಂಬಂಧ ಕೈಗೊಳ್ಳಲಾದ ಜಂಟಿ ಸಮೀಕ್ಷೆಯಂತೆ ಬೆಳಹಾನಿ ವಿವರವನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.

2024ನೇ ಸಾಲಿನ ಮುಂಗಾರಿನ ಅವಧಿಯಲ್ಲಿ (ದಿನಾಂಕ: 1.06.2024 ರಿಂದ 31.08.2024) ಅತಿವೃಷ್ಠಿಯಿಂದ ಜಿಲ್ಲೆಯಾದ್ಯಂತ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಯಾಗಿರುತ್ತವೆ. ಹಾನಿಗೊಳಗಾದ ಬೆಳೆಗಳಿಗೆ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಪಾವತಿಮಾಡುವ ಸಂಬಂಧ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ.

ಜಂಟಿ ಸಮೀಕ್ಷೆಯಂತೆ ಬೆಳೆ ಹಾನಿ ವಿವರವನ್ನು ನಿಗದಿತ ನಮೂನೆಯಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿ, ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್/ಕೃಷಿ/ ತೋಟಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ 7 ದಿನಗಳೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net