ಸೆ.21ರಂದು ವಾರ್ಷಿಕ ಮಹಾಸಭೆ

Published on

ಚಾಮರಾಜನಗರ: ಜಿಲ್ಲಾ ಸಹಕಾರ ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 21ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸತ್ತಿ ರಸ್ತೆಯಲ್ಲಿರುವ ಲ್ಯಾಂಪ್ಸ್ ಸಹಕಾರ ಸಂಘದಲ್ಲಿ ಏರ್ಪಡಿಸಲಾಗಿದೆ.

ಸಭೆಗೆ ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳು ನಿರ್ಣಯ ಮಾದರಿಯನ್ನು ಭರ್ತಿಮಾಡಿ ಕಡ್ಡಾಯವಾಗಿ ತರಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಎಚ್.ಎಸ್. ನಂಜುಂಡಪ್ರಸಾದ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮನುಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net