ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮತ್ತು ವಿವಾಹ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಉನ್ನತ ಶಿಕ್ಷಣ ಪಡೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮತ್ತು ಸಾಮಾನ್ಯ ವ್ಯಕ್ತಿ ವಿಕಲಚೇತನರ ವ್ಯಕ್ತಿಯನ್ನು ವಿವಾಹವಾಗುವ ವ್ಯಕ್ತಿಗಳಿಗೆ ವಿವಾಹ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಅ.5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ (ದೂ.ಸಂ 08226-223688) ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net