ಜಿಮ್ ಸ್ಥಾಪನೆ ಸಹಾಯಧನ

Published on

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟಜಾತಿ ಉಪಯೋಜನೆಯಡಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳೊಂದಿಗೆ ಸೆ. 23ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ 08226-224932 ಮತ್ತು ಮೊ.ಸಂ 9844160841 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net