ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್

Published on

ಚಾಮರಾಜನಗರ: ಕೆಎಸ್‌ಆರ್‌ಟಸಿ ಬಸ್ ಚಲಾಯಿಸುವ ವೇಳೆ ಚಾಲಕನಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಕೆಳಗೆ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ.

ಹನೂರು ತಾಲೂಕಿನ ಹೊಸ ರಾಮಪುರ ಬಳಿ ಭಾನುವಾರ ಕೊಳ್ಳೇಗಾಲ ಮಾರ್ಗವಾಗಿ ಸಾಗಿಬಂದ ಸಾರಿಗೆ ಬಸ್ ಚಲಾಯಿಸುತ್ತಿದ್ದ ಚಾಲಕ ಸುಭಾಷ್ ಎಂಬುವವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗದೆ. ಈ ವೇಳೆ ಅವರು ಚಲಿಸುತ್ತಿದ್ದ ಬಸ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಪರಿಣಾಮವಾಗಿ ಬಸ್ ರಸ್ತೆ ಸಮೀಪದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಈ ಸಂದರ್ಭದಲ್ಲಿ ಬಸ್ ನಿರ್ವಾಹಕ ನಾಗೇಂದ್ರ ಎಂಬುವವರಿಗೆ ಎದೆಗೆ ಪೆಟ್ಟಾಗಿದ್ದು, ಚೇತರಿಸಿಕೊಂಡಿದ್ದಾರೆ. ಬಸ್‌ನಲ್ಲಿ ಓರ್ವನೇ ಪ್ರಯಾಣಿಕ ಇದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಚಾಲಕ ಸುಭಾಷ್ ಅವರನ್ನ ಚಿಕಿತ್ಸೆಗಾಗಿ ಚಾಮರಾಜನಗರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net