ಜಿಲ್ಲಾ ಯುವ ದಸರಾಕ್ಕೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಚಾಮರಾಜನಗರ ದಸರಾ ಕಾರ್ಯಕ್ರಮದ ಯುವ ದಸರಾ ಅಂಗವಾಗಿ ವಿವಿಧ ನೃತ್ಯ ಪ್ರಕಾರಗಳಲ್ಲಿ ಪ್ರದರ್ಶನಕ್ಕಾಗಿ ಕಾಲೇಜು ತಂಡಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಾಲೇಜು ತಂಡಗಳು ವಿವಿಧ ನೃತ್ಯ ಪ್ರಕಾರಗಳಲ್ಲಿ ಪ್ರದರ್ಶನಕ್ಕಾಗಿ ಸೆಪ್ಟೆಂಬರ್ 19ರ ಸಂಜೆ 5 ಗಂಟೆಯೊಳಗೆ ಆನ್ ಲೈನ್ ಛ್ಞ್ಚ.ಟ್ಠಛಿಃಜಞಜಿ.್ಚಟಞ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರತಿ ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಅವಕಾಶವಿರುತ್ತದೆ. ಅರ್ಜಿಯನ್ನು ತಂಡದ ಮುಖ್ಯಸ್ಥರು ಮಾತ್ರ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಸಲ್ಲಿಸುವ ಅರ್ಜಿಯ ಒಂದು ಪ್ರತಿಯನ್ನು ಸದರಿ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 218ಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಹಾಗೂ ಚಾಮರಾಜನಗರ ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸನ್ನ ಅವರ ಮೊ.ಸಂ 6360790592 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net