ಕೇಂದ್ರ ಸರ್ಕಾರದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

13rajesh5
Published on

ಚಾಮರಾಜನಗರ: ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ವಿರುದ್ಧ ಎಸ್‌ಡಿಪಿಐ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸುಲ್ತಾನ್ ಷರೀಷ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಗೆ ಮನವಿ ಸಲ್ಲಿಸಿದರು. ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಕೇಂದ್ರ ಸರ್ಕಾರ ವಕ್ಫ್ ಬಿಲ್ -2024 ತಂದಿರುವುದು ಅತ್ಯಂತ ಆತಂಕಕಾರಿ. ಇದರ ಹಿಂದೆ ಬಿಜೆಪಿಗೆ ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರವಿದೆ ಎಂದರು.

ಹಾಲಿ ಇರುವ ವಕ್ಫ್ ಕಾಯ್ದೆಗೆ ಸರಿ ಸುಮಾರು 40 ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ್ ಕಾಯ್ದೆಯನ್ನೇ ನಾಶಗೊಳಿಸಲಾಗಿದೆ. ಇದು ಜಾತ್ಯತೀತ ಮೌಲ್ಯಗಳ ವಿರುದ್ಧ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ಉಪಾಧ್ಯಕ್ಷ ಸಿ.ಎಸ್.ಸೈಯದ್ ಆರ್ೀ, ಪ್ರಧಾನ ಕಾರ್ಯದರ್ಶಿ ಮಹೇಶ್, ಕಾರ್ಯದರ್ಶಿ ಜಬಿನೂರ್, ಖಜಾಂಚಿ ಸಿ.ಕೆ ನಯಾಜ್ ಉಲ್ಲಾ, ಟೌನ್ ಅಧ್ಯಕ್ಷ ಕಲೀಲ್ ಉಲ್ಲಾ, ಟೌನ್ ಉಪಾಧ್ಯಕ್ಷ ಮಜರ್ ಖಾನ್, ಕಾರ್ಯದರ್ಶಿ ತೌಸಿಫ್ ಪಾಷ, ಕೆ.ವೆಂಕಟರಾಜು, ಮೌಲಾನಾ ಇಸ್ಮಾಯಿಲ್ ಹಜರತ್, ನಗರಸಭಾ ಸದಸ್ಯರಾದ ಮೊಹಮ್ಮದ್‌ಅಮೀಕ್, ಅಪ್ಸರ್ ಪಾಷ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net