ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

Accident
Published on

ಚಾಮರಾಜನಗರ: ನಂಜನಗೂಡು-ಚಾಮರಾಜನಗರ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದ ಎನ್.ನಾಗೇಶ್(37) ಮೃತರು. ಇವರು ಗುರುವಾರ ರಾತ್ರಿ ಚಾಮರಾಜನಗರದಿಂದ ಕೆಲ್ಲಂಬಳ್ಳಿ ಗ್ರಾಮಕ್ಕೆ ತೆರಳುವಾಗ ನಂಜನಗೂಡು ರಸ್ತೆಯಲ್ಲಿರುವ ರೈಸ್ ಮಿಲ್ ಸಮೀಪದ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಮರಾಜನಗರ ವೈದ್ಯಕೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಸಂಬಂಧಿಕರಿಗೆ ನೀಡಲಾಯಿತು. ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net