22 ರಂದು ಕೈಗಾರಿಕಾ ಸಂಸ್ಥೆ ವಾರ್ಷಿಕ ಸಭೆ

Published on

ಚಾಮರಾಜನಗರ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವಾರ್ಷಿಕ ಸಭೆಯನ್ನು ಸೆ.22 ರಂದು ಆಯೋಜಿಸಲಾಗಿದೆ.

ನಗರದ ನಿಜಗುಣ ರೆಸಿಡೆನ್ಸಿಯಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಸಭೆಯನ್ನು ಕೆಎಫ್‌ಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ವಿ.ಪ್ರಭಾಕರ್ ಅಧ್ಯಕ್ಷತೆ ವಹಿಸುವರು. ಕೆಎಫ್‌ಸಿಸಿಐ ಮಾಜಿ ಅಧ್ಯಕ್ಷ ಆರ್.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net