ಚಿಕಿತ್ಸೆಗೆ ಸ್ಪಂದಿಸದೆ ಲೈನ್‌ಮನ್ ಸಾವು

Published on

ಕೊಳ್ಳೇಗಾಲ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಪಾರ್ಶ್ವವಾಯು ಪೀಡಿತನಾಗಿದ್ದ ಸೆಸ್ಕ್ ಲೈನ್‌ಮನ್ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ತಾಲೂಕಿನ ಸತ್ತೇಗಾಲ ಗ್ರಾಮದ ರಾಮ ಮಂದಿರದ ಬಸವರಾಜು (40) ಮೃತ. ಯಳಂದೂರಿನ ಸೆಸ್ಕ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ. ಸೆ.13 ರಂದು ಕೊಳ್ಳೇಗಾಲ ಸೆಸ್ಕ್ ಕಚೇರಿ ಮುಂದೆ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದ ಅವರನ್ನು ನೌಕರರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದರು. ಸೆ.14 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪತ್ನಿ ನಾಗರತ್ನ ಪಟ್ಟಣ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net