ನಾಲೆಯಲ್ಲಿ ಬಿದ್ದು ವಿದ್ಯಾರ್ಥಿ ಸಾವು

Published on

ಚಾಮರಾಜನಗರ: ಕಬಿನಿ ನಾಲೆಯಲ್ಲಿ ಕಾಲುಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ತಾಲೂಕಿನ ಸಂತೇಮರಹಳ್ಳಿ ಸಮೀಪದ ಬಸವಟ್ಟಿ ಗ್ರಾಮದ ನಿವಾಸಿ ಮಹದೇವಮ್ಮ ಎಂಬುವವರ ಪುತ್ರ ವೈ.ಎನ್.ರೋಹಿತ್ (14) ಮೃತ ದುರ್ದೈವಿ.

ಈತ ಸಂತೇಮರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಬುಧವಾರ ಸಂಜೆ ಕಬಿನಿ 42ರ ಉಪನಾಲೆ ಕಡೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ನಾಲೆಗೆ ಬಿದ್ದು ಮೃತಪಟ್ಟಿದ್ದಾನೆ. ಈ ವೇಳೆ ಇದ್ದ ಒಬ್ಬ ಮಗನನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net