ಚಾಮರಾಜನಗರ:ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತವಾಗಿ ಮಹಿಳೆಯರಿಗೆ ಮಹಿಳಾ ಹೊಲಿಗೆ ತರಬೇತಿಯನ್ನು ಸೆ.25ರಂದು ಪ್ರಾರಂಭಿಸುತ್ತಿದ್ದು ಆಸಕ್ತಿಯುಳ್ಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಪ್ರಯೋಜನ ಪಡೆಯಬಹುದಾಗಿದೆ.
ಸಂತೇಮರಹಳ್ಳಿ ರಸ್ತೆಯಲ್ಲಿರುವ ಮಾದಾಪುರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9606098878, 8722483393, 9739067155, 8088066890 ಸಂಪರ್ಕಿಸುವಂತೆ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.