ಗೃಹಲಕ್ಷ್ಮೀ ಯೋಜನೆಗೆ ಡಿಸಿ ಚಾಲನೆ

22e102b8-6a2a-473b-a0b7-bc4fb66022d1
Published on

ಚಾಮರಾಜನಗರ: ನಗರದ ಸತ್ತಿ ರಸ್ತೆಯಲ್ಲಿರುವ ಡಿ.ದೇವರಾಜ್ ಅರಸು ಭವನದಲ್ಲಿ ಗುರುವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 2.9 ಲಕ್ಷ ಕುಟುಂಬಗಳು ಈ ಯೋಜನೆಯ ಅನುಕೂಲ ದೊರೆಯುತ್ತದೆ. ಕುಟುಂಬ ಯಜಮಾನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಯಾವುದೇ ಜಾತಿ, ಧರ್ಮ ಭೇದವಿಲ್ಲದೇ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮೀ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದಾ, ಯೋಜನಾ ನಿರ್ದೇಶಕಿ ಸುಧಾ, ನಗರಸಭೆ ಪೌರಾಯುಕ್ತ ರಾಮದಾಸ್, ನಗರಸಭೆ ಸದಸ್ಯರಾದ ನೀಲಮ್ಮ, ಖಲೀಲ್ ಉಲ್ಲಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net