ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.24 ಹಾಗೂ 25ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪಧೆರ್ಯಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಸೆ.24 ರಂದು ಅಥ್ಲೇಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ 25ರಂದು ಯೋಗ ಫುಟ್ಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಬಾಸ್ಕೆಟ್‌ಬಾಲ್, ಹ್ಯಾಂಡ್‌ಬಾಲ್, ಬಾಲ್ ಬ್ಯಾಡ್ಮಿಂಟನ್, ನೆಟ್‌ಬಾಲ್, ಹಾಕಿ ಕ್ರೀಡೆಗಳನ್ನು ನಡೆಸಲಾಗುವುದು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆಯನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಕ್ರೀಡಾಪಟುಗಳು ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಕ್ರೀಡಾಪಟುಗಳಿಗೆ ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಈಗಾಗಲೇ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೀಡಲಾಗಿರುವ ಗುರುತಿನ ಚೀಟಿ ಹಾಗೂ ವಿಳಾಸಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್‌ಅನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ 08226-224932 ಅಥವಾ ಮೊ.ನಂ 9916466659 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.