ಸೆ.21ರಂದು ಜನ ಸಂಪರ್ಕ ಸಭೆ

Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ, ಹರದನಹಳ್ಳಿ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಸೆ.21ರಂದು ವಿದ್ಯುತ್ ಸಂಬಂಧ ಜನ ಸಂಪರ್ಕ ಸಭೆ ನಿಗದಿಪಡಿಸಲಾಗಿದೆ.

ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಚಾಮರಾಜನಗರ ಉಪ-ವಿಭಾಗದ ಕಚೇರಿಯಲ್ಲಿ, ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಹರದನಹಳ್ಳಿ ಉಪವಿಭಾಗ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಸಂತೇಮರಹಳ್ಳಿ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಸಂಬಂಧ ಜನ ಸಂಪರ್ಕ ಸಭೆ ನಡೆಯಲಿದೆ. ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳಿದ್ದಲ್ಲಿ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net