

ಚಾಮರಾಜನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಗುಂಡ್ಲುಪೇಟೆ ಪಟ್ಟಣದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ವಿಜ್ಞಾನ, ವಿಜ್ಞಾನ, ಹಿಂದಿ ಭಾಷಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗುಂಡ್ಲುಪೇಟೆ ಪಟ್ಟಣದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್‌ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಗೆ ಸಂಪೂರ್ಣ ದಾಖಲೆಗಳೊಂದಿಗೆ ಸೆ.26ರೊಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅತಿಥಿ ಶಿಕ್ಷಕರಿಗೆ ಮಾಹೆಗೆ 10,500 ರೂ. ಗೌರವಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಗುಂಡ್ಲುಸಪೇಟೆ ಪಟ್ಟಣದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿಶಾಲೆ ಮೊ.ಸಂ 9964346118 ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೊ.ಸಂ 7022054512 ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.