ಚಾಮರಾಜನಗರ ; ವಿದ್ಯಾರ್ಥಿಗಳು ಮೂಢನಂಬಿಕೆಯನ್ನು ತೊಡೆದು ಹಾಕಿ, ವೈಜ್ಞಾನಿಕ ಮನೋಭಾವನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಆರ್.ಮಹದೇವ ಸಲಹೆ ನೀಡಿದರು.
ಕೊಳ್ಳೇಗಾಲ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಬೆಂಗಳೂರಿನ ಪ್ರಯೋಗ ಸಂಸ್ಥೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಪ್ರೇರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ವೈಜ್ಞಾನಿಕ ಮನೋಭಾವನೆ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಈ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನೆರೆಹೊರೆಯ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿಮ್ಮರಾಜಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಾವೇ ಸ್ವತಃ ವಿಜ್ಞಾನ ಉಪಕರಣಗಳನ್ನು ಬಳಸಿ ಪ್ರಯೋಗಗಳನ್ನು ಮಾಡಿ ತಾವೇ ಫಲಿತಾಂಶವನ್ನು ನೋಡಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ನಾಗರಾಜು, ಶಾಲೆಯ ಪ್ರಾಂಶುಪಾಲ ಸೊಹೇಬ್ ಪಾಷ, ಸಿಆರ್‌ಪಿ ಶರತ್, ತಿಮ್ಮರಾಜಿಪುರ ಶಾಲೆಯ ಮುಖ್ಯ ಶಿಕ್ಷಕ ಬಸವಣ್ಣ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿಜ್ಞಾನ ಶಿಕ್ಷಕ ರಾಜ್, ಪ್ರಯೋಗ ಸಂಸ್ಥೆಯ ಪ್ರಹ್ಲಾದ, ಸಂತೋಷ್, ಮಲ್ಲಿಕಾರ್ಜುನಸ್ವಾಮಿ, ಗೌರಿಶಂಕರ್, ಸಂತೋಷ್, ಕಾವ್ಯಾ, ದಿವ್ಯಶ್ರೀ, ಭಾವನಾ, ಸಂತೋಷ್, ಶಶಿಧರ್ ಇದ್ದರು.