ಹಿರಿಯರಿಗೆ ಆರೋಗ್ಯ ತಪಾಸಣೆ ಸಹಕಾರಿ

25Rajesh7
Published on

ಚಾಮರಾಜನಗರ : ಹಳ್ಳಿಗಳಲ್ಲಿ ವಾಸಿಸುವ ಹಿರಿಯ ನಾಗರೀಕರಿಗೆ ಆಗಾಗ್ಗೆ ಆರೋಗ್ಯ ತಪಾಸಣೆ ಮಾಡುವುದು ಅತ್ಯಂತ ಸಹಕಾರಿಯಾಗಿದೆ ಎಂದು ಹೊಂಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಮತಾ ಕುಮಾರಿ ಸಲಹೆ ನೀಡಿದರು.

ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಏರುಪೇರಿನಿಂದ ಹಲವಾರು ಖಾಯಿಲೆಗಳು ಬರುತ್ತಿದೆ. ಮುಖ್ಯವಾಗಿ ಹಿರಿಯ ನಾಗರೀಕರು ಒಂದಿಲ್ಲೊಂದು ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಇಂತಹ ಆರೋಗ್ಯ ತಪಾಸಣೆ ಮಾಡುತ್ತಿರುವುದು ತುಂಬಾ ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಜನರು ಇಂತಹ ಕಾರ್ಯಕ್ರಮಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಶಿಬಿರದಲ್ಲಿ 170 ಕ್ಕಿಂತಲೂ ಹೆಚ್ಚು ಜನರು ಭಾಗವಹಿಸಿದ್ದರು. ಎಲ್ಲರಿಗೂ ರಕ್ತದ ಒತ್ತಡ, ಮಧುಮೇಹ ತಪಾಸಣೆ ಮಾಡಲಾಯಿತು. ಅದರಲ್ಲಿ 2 ರಕ್ತದ ಒತ್ತಡ ಮತ್ತು 3 ಜನರಿಗೆ ಮಧುಮೇಹ ಇರುವುದು ದೃಢವಾಯಿತು. ಉಳಿದಂತೆ 31 ಜನರಿಗೆ ಎಕ್ಸ್‌ರೇ ಮಾಡಲಾಯಿತು, 57 ಜನರಿಗೆ ಕಾ ಪರೀಕ್ಷೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ರೇವಣ್ಣ, ಉಪಾಧ್ಯಕ್ಷೆ ಲೀಲಾವತಿ ಮೂರ್ತಿ, ಅಭಿವೃದ್ಧಿ ಅಧಿಕಾರಿ ವೀಣಾ, ಡಾ.ವಿಶಾಲ್, ಡಾ.ಶೀಲಾ, ಸಿಎಚ್‌ಓ ರವಿಕಿರಣ್, ರೇಖಾ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net