ಗಮನ ಸೆಳೆದ ವಸ್ತು ಪ್ರದರ್ಶನ

23rajesh8
Published on

ಚಾಮರಾಜನಗರ: ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಎಲ್ಲರ ಗಮನಸೆಳೆಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಎಲ್ಲರ ಗಮನಸೆಳೆಯಿತು.

ಭಾಷಾ ಲೋಕ, ನಲಿ-ಕಲಿ, ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ಉರ್ದು ಶೈಕ್ಷಣಿಕ ಲೋಕ, ಶಿಕ್ಷಕರು ಸ್ವಯಂ ತಯಾರಿಸಿ ಬಳಸುವ ಕಲಿಕೋಪಕರಣಗಳು ಹಾಗೂ ಆಟೋ ಮೊಬೈಲ್ ಮತ್ತು ಮಾಹಿತಿ ತಂತ್ರಜ್ಞಾನದ ಮಾಹಿತಿಯನ್ನು ತಿಳಿಸುವ ವಸ್ತು ಪ್ರದರ್ಶನ ಆಕರ್ಷಕವಾಗಿತ್ತು.

ಈ ವೇಳೆ ಮಲ್ಲಯ್ಯನಪುರ ಆದರ್ಶ ವಿದ್ಯಾಲಯ ಶಾಲೆಯ ಮಕ್ಕಳು ಸಿದ್ಧಪಡಿಸಿದ್ದ ಮೆಟ್ರೋ ಲೈನ್ ಮೂಲಕ ವಿದ್ಯುತ್ ಉತ್ಪಾದನೆ ಮತ್ತು ಗ್ಯಾಸ್ ಲಿಕೇಜ್ ಸೆನ್ಸಾರ್ ಮಾಡುವ ಮಾಡೆಲ್‌ಗಳನ್ನು ಹೆಚ್ಚಿನ ಜನರು ವೀಕ್ಷಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net