11 ಗ್ರಾಮಗಳಲ್ಲಿ ಪಿಎಂ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನ

DC shilpa nag 02
Published on

ಚಾಮರಾಜನಗರ : ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನವನ್ನು 17 ಇಲಾಖೆಗಳ ಸಹಯೋಗದೊಂದಿಗೆ 25 ಯೋಜನೆಗಳನ್ನು ಪರಿಶಿಷ್ಟ ಪಂಗಡದ ಜನರು ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಚಾಮರಾಜನಗರ ಜಿಲ್ಲೆಯ 11 ಗ್ರಾಮಗಳಲ್ಲಿ ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.

ಕೇಂದ್ರ ಬುಡಕಟ್ಟು ಮಂತ್ರಾಲಯದ ವತಿಯಿಂದ ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನ ಯೋಜನೆಯನ್ನು ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಜನರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ದೇಶದ 24 ರಾಜ್ಯ ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 549 ಜಿಲ್ಲೆಗಳಿಗೆ ಸೇರಿದ 2911 ತಾಲೂಕಿನ ವ್ಯಾಪ್ತಿಯಲ್ಲಿ ಬರುವ 63,843 ಹಳ್ಳಿಗಳ ಸಮಗ್ರ ಅಭಿವೃದ್ಧಿಗಾಗಿ 25 ಯೋಜನೆಗಳನ್ನು ದೇಶಾದ್ಯಂತ ಜಾರಿಗೊಳಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನರು ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ 11 ಗ್ರಾಮಗಳಾದ ಚಾಮರಾಜನಗರ ತಾಲೂಕಿನ ಬೇಡಗುಳಿ, ಕಣ್ಣೆಗಾಲ, ಯಾನಗಹಳ್ಳಿ, ಮೇಲ್‌ಮಾಳ, ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ, ಸೋಮನಪುರ, ಮದ್ದೂರು, ಯಳಂದೂರು ತಾಲೂಕಿನ ಅಗರ, ಬಿಳಿಗಿರಿರಂಗನ ಬೆಟ್ಟ, ಡಿ.ಕಂದಹಳ್ಳಿ ಹಾಗೂ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮಗಳು ಆಯ್ಕೆಯಾಗಿವೆ. ಕೇಂದ್ರ ಸರ್ಕಾರದ ಆದೇಶದಂತೆ ಆಯ್ಕೆಯಾಗಿರುವ 11 ಗ್ರಾಮಗಳಲ್ಲಿ ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸ ಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net