ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಸಹನಾ ಶಾಲೆ ಮಕ್ಕಳು ಆಯ್ಕೆ

Published on

ಕೊಳ್ಳೇಗಾಲ: ಇತ್ತೀಚೆಗೆ ಚಾಮರಾಜನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪಟ್ಟಣದ ಸಹನಾ ಇಂಗ್ಲಿಷ್ ಮಾಧ್ಯಮ ಶಾಲೆಯ 8 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ತೇಜಸ್, ನಂದ ಕುಮಾರ್, ಹನ್ಸಿಕಾ, ನವಾಜ್ ಪಾಷ, ಸಮಿಕಾ, ಹರ್ಷವರ್ದನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಹನಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಂಜುಂಡಸ್ವಾಮಿ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರತಿವರ್ಷವೂ ಸಹಾ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ಎಲ್ಲ ವಿದ್ಯಾ ರ್ಥಿಗಳು ಹಾಗೂ ಕರಾಟೆ ಶಿಕ್ಷಕ ಕೆ. ನಂಜುಂಡಸ್ವಾಮಿ ಅವರನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net