ಹೆಜ್ಜೇನು ದಾಳಿಯಿಂದ ಗಾಯಗೊಂಡಿದ್ದವ ಸಾವು

Crime Logo
Published on

ಹನೂರು: ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದ ವ್ಯಕ್ತಿಯೊಬ್ಬ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾನೆ.

ಜೀರಿಗೆಗದ್ದೆ ಗ್ರಾಮದ ಮಾದೇಶ (40) ಮೃತ. ಇವರು ಸೆ.21ರಂದು ಗ್ರಾಮದ ಶನೈಶ್ಚರ ದೇಗುಲದಲ್ಲಿ ಪೂಜೆಗಾಗಿ ತೆರಳಿದ್ದರು. ಈ ವೇಳೆ ದೇಗುಲದ ಸಮೀಪದಲ್ಲಿ ಸೌದೆ ಒಲೆಯಿಂದ ಅಡುಗೆ ತಯಾರಿಸಲಾಗುತ್ತಿತ್ತು. ಹೊಗೆಯಿಂದ ಮರದಲ್ಲಿದ್ದ ಹೆಜ್ಜೇನು ದಾಳಿ ನಡೆಸಿತ್ತು. ಗಾಯಗೊಂಡ ಇವರನ್ನು ಸ್ಥಳೀಯರು ಪಿ.ಜಿ ಪಾಳ್ಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಅಗತ್ಯ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದರೆ ಸೆ.22ರಂದು ಮಾದೇಶ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯ ಮೇರೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬುಧವಾರ ಮೃತರ ತಾಯಿ ಬಸಮ್ಮ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮೃತದೇಹವನ್ನು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net