ಗಮನಸೆಳೆದ ಸ್ವಚ್ಚತಾದೀಪ, ರಂಗೋಲಿ ಸ್ಪರ್ಧೆ

26rajesh1
Published on

ಚಾಮರಾಜನಗರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ಗಮನಸೆಳೆಯಿತು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊನಾ ರೋತ್ ಚಾಲನೆ ನೀಡಿದರು. ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಪಿಎಲ್‌ಎಫ್ ಸ್ವಸಹಾಯ ಗುಂಪಿನ ಮಹಿಳೆಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net