ಪೋಷಣ್ ಅಭಿಯಾನ ಸದ್ಬಳಕೆ ಮಾಡಿಕೊಳ್ಳಿ

Published on

ಕೊಳ್ಳೇಗಾಲ: ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮ ಮಹತ್ವವಾದದ್ದು. ಇದರ ಸದುಪಯೋಗವನ್ನು ಮಹಿಳೆಯರು, ಮಕ್ಕಳು ಪಡೆದುಕೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಗಳವಾರ ಕೇಂದ್ರ ಸಂವಹನ ಶಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಾನಸ ಶಿಕ್ಷಣ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದೆ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಕೊಳ್ಳೇಗಾಲದಲ್ಲಿ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. 12 ಸಾವಿರಕ್ಕೂ ಹೆಚ್ಚು ಜನರು ತಪಾಸಣೆಗೆ ಒಳಪಟ್ಟು ಪ್ರಯೋಜನ ಪಡೆದಿದ್ದರು. ಅದರಂತೆ, ಇದೀಗ ಆಯೋಜಿಸಿರುವ ಪೋಷಣ್ ಮಾಸ-2024 ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು ಸಲಹೆ ನೀಡಿದರು.

ಸಿಎಫ್‌ಟಿಆರ್‌ಐ ನಿವೃತ್ತ ಹಿರಿಯ ವಿಜ್ಞಾನಿ ಕೊಳ್ಳೇಗಾಲ ಶರ್ಮ ಮಾತನಾಡಿ, ಮಹಿಳೆಯರನ್ನು ರಕ್ತ ಹೀನತೆ ಕಾಡುತ್ತಿದೆ. ಅದರಲ್ಲೂ ಬುಡಕಟ್ಟು ಜನರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ಕಾಯಿಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ ಎಂದರು.
ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದತ್ತೇಶ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ ಬೆಳ್ಳುಂಡಗಿ, ಆರ್‌ಎಫ್‌ಒ ಕೆ.ಪಿ.ಪ್ರಫುಲ್ಲಾ, ಕೇಂದ್ರ ಸಂಹವನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net