ಪ್ರತಿಭಟನೆಗೆ ಕರವೇ ಕಾರ್ಯಕರ್ತರ ಬೆಂಬಲ

27-kollegal-1,
Published on

ಕೊಳ್ಳೇಗಾಲ: ಪಟ್ಟಣದ ಕಬಿನಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 40 ದಿನಗಳಿಂದ ತಾಲೂಕಿನ ಗುಂಡಾಲ್ ಜಲಾಶಯದ ಹಳೇ ಸ್ಥಿರ ಅಚ್ಚಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘಟನೆ ಡೆಸುತ್ತಿರುವ ಪ್ರತಿಭಟನೆಗೆ ಕರವೇ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಶುಕ್ರವಾರ ಬೆಂಬಲ ಸೂಚಿಸಿದರು.

ವೇದಿಕೆಯ ನಗರ ಘಟಕದ ಅಧ್ಯಕ್ಷ ಜಗದೀಶ್ ಶಾಸ್ತ್ರಿ ಮಾತನಾಡಿ, ಗುಂಡಾಲ್ ಜಲಾಶಯದ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದವರು ಜಮೀನುಗಳಿಗೆ ಗುಂಡಾಲ್ ಜಲಾಶಯದಿಂದ ನೀರು ಹರಿಸುವಂತೆ ಹೋರಾಟ ನಡೆಸುತ್ತಿದ್ದರೂ ಯಾವುದೇ ಅಧಿಕಾರಿಗಳು ಇತ್ತ ಗಮನಹರಿಸದಿರುವುದು ಖಂಡನೀಯ. ಕೂಡಲೇ ಜಿಲ್ಲಾಧಿಕಾರಿ ಈ ವಿಚಾರವಾಗಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ರೈತರ ಹೋರಾಟಕ್ಕೆ ಸರಿಯಾದ ರೀತಿಯಲ್ಲಿ ನ್ಯಾಯ ದೊರಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಹಿತರಕ್ಷಣಾ ಸಂಘದ ಅಧ್ಯಕ್ಷ ದಶರಥ್, ಕರವೇ ತಾಲೂಕು ಘಟಕದ ಉಪಾಧ್ಯಕ್ಷ ಪ್ರಜ್ವಲ್, ಪ್ರಧಾನ ಕಾರ್ಯದರ್ಶಿ ಎನ್.ಸುರೇಶ್, ಕಾರ್ಯಾಧ್ಯಕ್ಷ ಮೊಹಮ್ಮದ್ ಅಪ್ಜಲ್, ಸಹ ಸಂಘಟನಾ ಕಾರ್ಯದರ್ಶಿ ಭೂಪತಿ, ದೊಡ್ಡಿಂದುವಾಡಿ ಸಿದ್ದರಾಜು ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net