ಕುಶಲಕರ್ಮಿಗಳಿಂದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ಸರಬರಾಜು ಕಾರ್ಯಕ್ರಮದಡಿ ಹೊಲಿಗೆಯಂತ್ರ ಸುಧಾರಿತ ಉಪಕರಣ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್, ಹೊಲಿಗೆ ತರಬೇತಿ ಪಡೆದ ಪ್ರಮಾಣಪತ್ರ, ಬಿಪಿಎಲ್ ಪಡಿತರ ಚೀಟಿ, ಅಂಗವಿಕಲರಾಗಿದ್ದಲ್ಲಿ ಪ್ರಮಾಣಪತ್ರ ಹಾಗೂ ಆಯಾ ಗ್ರಾಮ ಪಂಚಾಯಿತಿಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಲಗತ್ತಿಸಬೇಕು. ಸಂಬಂಧಪಟ್ಟ ದಾಖಲಾತಿಗಳನ್ನು ವೆಬ್‌ಸೈಟ್‌ನಲ್ಲಿ ಸೆ.30ರಿಂದ ನ.5 ರೊಳಗೆ ಅಪ್ ಲೋಡ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳು ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net