ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಈಗಾಗಲೇ ಕಾರ್ಯಾರಂಭಗೊಂಡಿರುವ ಫುಲ್‌ಟೈಮ್ ಲೀಗಲ್ ಆ್ಯಡ್ ಡಿಫೆನ್ಸ್ ಕೌನ್ಸಿಲ್ ಸಿಸ್ಟಮ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲರಾಗಿ ಕಾರ್ಯನಿರ್ವಹಿಸಲು ಡೆಪ್ಯುಟಿ ಚೀಫ್ ಲೀಗಲ್ ಆ್ಯಡ್ ಡಿಫೆನ್ಸ್ ಕೌನ್ಸಲ್, ಅಸಿಸ್ಟೆಂಟ್ ಲೀಗಲ್ ಆ್ಯಡ್ ಡಿಫೆನ್ಸ್ ಕೌನ್ಸಲ್ ಹುದ್ದೆ ಹಾಗೂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲು ಕಚೇರಿ ಸಹಾಯಕರು, ಕ್ಲರ್ಕ್, ಕಚೇರಿ ಜವಾನರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಪ್ರಾಧಿಕಾರದ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅ.3ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಸಲ್ಲಿಸಬೇಕು. ವಕೀಲರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಸೆ.28ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net