ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳ ಆಯೋಜನೆ

Published on

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಪ್ರಯುಕ್ತ ಅ.4ರಿಂದ 7ರವರೆಗೆ ಮಹಿಳಾ ದಸರಾ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ.

ಅ.4ರಂದು ತಾಲೂಕು ಮಟ್ಟದ ಆರೋಗ್ಯವಂತ ಶಿಶುಗಳ ಸ್ಪರ್ಧೆ, 5ರಂದು ಅಂಗವಿಕಲರಿಗೆ ಬಕೆಟ್ ಮತ್ತು ಬಾಲ್ ಸ್ಪರ್ಧೆ, ಲೆಮನ್ ಇನ್ ದಿ ಸ್ಪೂನ್, ಮ್ಯೂಸಿಕಲ್ ಚೇರ್ ಸ್ಪರ್ಧೆ, ಮಡಕೆ ಒಡೆಯುವ ಸ್ಪರ್ಧೆ, ಒಲೆ ರಹಿತ ಅಡುಗೆ ಸ್ಪರ್ಧೆ ಹಾಗೂ ಅ.7ರಂದು ರಂಗೋಲಿ ಸ್ಪರ್ಧೆ ಹಾಗೂ ಇತರ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮಹಿಳೆಯರು ಚಾಮರಾಜನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.08226-222603, ಸಂತೇಮರಹಳ್ಳಿ ಕಚೇರಿ ದೂ.08226-240215, ಗುಂಡ್ಲುಪೇಟೆ ಕಚೇರಿ ದೂ.08229-222286, ಕೊಳ್ಳೇಗಾಲ ಕಚೇರಿ ದೂ.08224-252367, ಯಳಂದೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.08226-224204 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಸ್ಪರ್ಧೆಗಳಿಗೆ ನೋಂದಣಿ ಮಾಡಿಸುವಂತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net