

ಚಾಮರಾಜನಗರ: ಅಪರಿಚಿತ ವ್ಯಕ್ತಿಯೊಬ್ಬ ರೈಲು ಹಳಿಗೆ ತಲೆಕೊಟ್ಟು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾನೆ. ತಾಲೂಕಿನ ಬದನಗುಪ್ಪೆ ಗ್ರಾಮದ ಬಳಿ ಹಾದು ಹೋಗಿರುವ ಮೈಸೂರು-ಚಾಮರಾಜನಗರ ರೈಲ್ವೆ ಹಳಿಗೆ ಅಪರಿಚಿತ ವ್ಯಕ್ತಿಯೊಬ್ಬ ತಲೆ ಕೊಟ್ಟು ಮೃತಪಟ್ಟಿದ್ದಾನೆ.
ಶನಿವಾರ ಬೆಳಗ್ಗೆ ವಿಷಯ ತಿಳಿದು ಬಂದಿದೆ. ಸ್ಥಳಕ್ಕೆ ನಂಜನಗೂಡು ರೈಲ್ವೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ವ್ಯಕ್ತಿಯ ವಯಸ್ಸು ಅಂದಾಜು 55 ಇರಬಹುದು ಎಂದು ಗುರುತಿಸಲಾಗಿದ್ದು, ಹೆಸರು ಮತ್ತು ವಿಳಾಸದ ಬಗ್ಗೆ ನಿಖರವಾದ ಮಾಹಿತಿ ದೊರೆತಿಲ್ಲ. ಮೃತದೇಹವನ್ನು ಚಾಮರಾಜನಗರದ ಸಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.