

ಚಾಮರಾಜನಗರ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ತಾಲೂಕು ಆಡಳಿತ ಸಹಯೋಗದೊಂದಿಗೆ 2024-25ನೇ ಸಾಲಿನಲ್ಲಿ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು, ಸ್ಥಳೀಯ ಪಶು ವೈದ್ಯಾಧಿಕಾರಿ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ಥಳೀಯ ಪಶು ವೈದ್ಯ ಸಂಸ್ಥೆ ಅಥವಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.