ಅ.1ರಂದು ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮ

Published on

ಚಾಮರಾಜನಗರ: ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಉಚಿತ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ಅ.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರಕುಮಾರ್ ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳುವರು. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ವಿ ಚಂದ್ರು, ನಗರಸಭಾ ಉಪಾಧ್ಯಕ್ಷೆ ಎಚ್.ಎಸ್. ಮಮತ, ಸದಸ್ಯ ಎಂ. ಮಹೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net