

ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅವಿಭಜಿತ ಜಿಲ್ಲೆ ಚಾಮರಾಜನಗರದಲ್ಲಿ ಆಯೋಜಿಸುತ್ತಿರುವ ದಸರಾ ಮಹೋತ್ಸವ ಆಚರಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಬಾರಿಯ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಚಾಮರಾಜನಗರ ದಸರಾ ಮಹೋತ್ಸವ-2024 ರ ಅಂಗವಾಗಿ ಅ.7 ರಿಂದ 9 ರವರೆಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಬಾರಿ ಹೆಚ್ಚಿನ ಅನುದಾನವನ್ನು ೋಷಣೆ ಮಾಡಿರುವ ಕಾರಣದಿಂದ ದಸರಾ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಲಪುಷ್ಪ ಪ್ರದರ್ಶನ, ಆಹಾರ ಮೇಳ, ಮಹಿಳಾ ದಸರಾ, ರೈತ ದಸರಾ, ಜಗಮಗಿಸುವ ದೀಪಾಲಂಕಾರ ಹಾಗೂ ಇನ್ನು ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಪ್ರಧಾನ ವೇದಿಕೆ, ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರ ಹಾಗೂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಮೂಲಕ ಜನರನ್ನು ಸಂಭ್ರಮದ ಮಳೆಯಲ್ಲಿ ಮಿಂದೇಳಿಸಲು ಜಿಲ್ಲಾಡಳಿತ ಸಜ್ಜುಗೊಂಡಿದೆ.
ಚಾ.ನಗರ ದಸರಾ ಮೆರವಣಿಗೆ:
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಅ.7 ರಂದು ಚಾ.ನಗರ ದಸರಾ ಮೆರವಣಿಗೆಗೆ ಜಿಲ್ಲಾ ಉಸ್ತವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಲಿದ್ದಾರೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ನಂದಿಕಂಬ, ವೀರಗಾಸೆ, ದಸರಾ ಗಾರುಡಿ ಗೊಂಬೆ, ಸೋಮನಕುಣಿತ, ಗೊರವರ ಕುಣಿತ, ಡೊಲ್ಲೂ ಕುಣಿತ, ವೀರಮಕ್ಕಳ ಕುಣಿತ, ನಾದಸ್ವರ, ಸ್ಯಾಕೋ್ಸೆೆನ್, ದೊಣ್ಣೆ ಹೊರಸೆ, ಚಿಲಿಪಿಲಿ ಗೊಂಬೆ, ಕೋಲಾಟ, ಪೂಜಾ ಕುಣಿತ, ತಮಟೆ, ಕೀಲು ಕುದುರೆ, ಹುಲಿವೇಷ, ವೀರ ಮಕ್ಕಳ ಕುಣಿತ, ಸುಗ್ಗಿ ಕುಣಿತ, ಕಂಸಾಳೆ, ಶವ ತಾಂಡವ ಹಾಗೂ ಇನ್ನಿತರೆ ಜಾನಪದ ಕಲಾಪ್ರಕಾರಗಳು ಭಾಗವಹಿಸಲಿದೆ. ಅದಲ್ಲದೇ ವಿವಿಧ ಇಲಾಖೆಗಳ ಟ್ಯಾಬ್ಲೋಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಲಿದೆ. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಅ.7 ರಿಂದ 9 ರವರೆಗೆ ದಸರಾ ಮಹೋತ್ಸವದ ಅಂಗವಾಗಿ 3 ದಿನಗಳ ಕಾಲ ಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಬಾರಿ ಲಪುಷ್ಪ ಪ್ರದರ್ಶನದಲ್ಲಿ ಮುಖ್ಯವಾಗಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರತಿಕೃತಿ ಅನಾವರಣಗೊಳ್ಳಲಿದೆ. ಅನ್ನದಾತರ ಕುರಿತಾದ ಮರಳು ಪ್ರತಿಕೃತಿ, ವಿವಿಧ ತರಕಾರಿಗಳು ಹಾಗೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳು ಜತೆಗೆ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಐಎ್ಎಸ್ಸಿ, ಜಲಾನಯನ, ಮಳೆ ಕೂಯ್ಲು, ಸಹಜ ಕೃಷಿಗೆ ಸಂಬಂಧಿಸಿದ ಮಾಡಲ್‌ಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅದಲ್ಲದೇ ಈ ಬಾರಿ ವಿಶೇಷವಾಗಿ ಕೃಷಿ ಸಂತೆಯನ್ನು ಆಯೋಜನೆ ಮಾಡಲಾಗುತ್ತಿದೆ.
ಜಗಮಗಿಸುವ ದೀಪಾಲಂಕಾರ:
ಈ ಬಾರಿಯ ದಸರಾ ಮಹೋತ್ಸವದಲ್ಲಿ ದೀಪಾಲಂಕಾರಕ್ಕೆ ಹೆಚ್ಚಿನ ಹೊತ್ತು ನೀಡಲಾಗಿದ್ದು, ಈಗಾಗಲೇ ಜಿಲ್ಲಾ ಕೇಂದ್ರ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನ, ರಥದ ಬೀದಿ, ಬಿ.ರಾಚಯ್ಯ ಜೋಡಿರಸ್ತೆ, ಡಿವಿಯೇಷನ್ ರಸ್ತೆ, ಸಂತೇಮರಹಳ್ಳಿ ರಸ್ತೆ ಹಾಗೂ ಇನ್ನಿತರೆ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದೆ. ಜಿಲ್ಲಾಡಳಿತ ಭವನದ ಆವರಣದಲ್ಲಿ ಮಾಡಿರುವ ದೀಪಾಲಂಕಾರ ಎಲ್ಲರನ್ನೂ ಕೈಬೀಸಿ ಕರೆಯುತ್ತಿದೆ. ವಿವಿಧ ಸರ್ಕಾರಿ ಕಚೇರಿಗಳನ್ನು ದೀಪಗಳಿಂದ ಸಿಂಗರಿಸಲಾಗಿದೆ. ರಾಷ್ಟ್ರೀಯ ನಾಯಕರು, ಶ್ರೀಚಾಮುಂಡೇಶ್ವರಿ, ಮಲೆ ಮಹದೇಶ್ವರ ಮತ್ತು ಇನ್ನಿತರೆ ದೇವತೆಗಳು ಹಾಗೂ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳು ದೀಪಾಲಂಕಾರದಲ್ಲಿ ಕಂಗೊಳಿಸಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ:
ಈ ಬಾರಿಯ ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಭಾಗವಹಿಸುತ್ತಿದ್ದು, ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಅವಕಾಶವನ್ನು ಮಾಡಿಕೊಡಲಾಗಿದೆ. ಉತ್ತಮ ರೀತಿಯಲ್ಲಿ ಪರಾಮರ್ಶಿಸಿ ಕಲಾವಿದರಿಗೆ ಅವಕಾಶವನ್ನು ನೀಡಲಾಗಿದೆ. ಅದರಂತೆ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ 6 ಗಂಟೆಯ ವರೆಗೆ ಸ್ಥಳೀಯ ಕಲಾವಿದರ ಕಾರ್ಯಕ್ರಮ 3 ದಿನಗಳ ಕಾಲವು ನಡೆಯಲಿದೆ. ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಮಾಜಿಕ ನಾಟಕ, ಪೌರಾಣಿಕ ನಾಟಕ, ರಂಗಗೀತೆಗಳ ಗಾಯನ ಹಾಗೂ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಜೆ.ಎಚ್.ಪಟೇಲ್ ಸಭಾಂಗಣದಲ್ಲಿ 3 ದಿನಗಳ ಕಾಲವೂ ಜನಪದ ಗೀತಾ ಗಾಯನ, ತತ್ವಪದ, ಭಜನೆ, ಹರಿಕಥೆ, ನೃತ್ಯರೂಪಕ, ಸೋಭಾನೆ ಸಂಭ್ರಮ ಹಾಗೂ ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.