ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಜಿಲ್ಲೆಯ ಸೆರೆಬ್ರಲ್ ಪಾಲ್ಸಿ, ಸ್ನಾಯು ಕ್ಷಯ, ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಅಂಗವಿಕಲ ವ್ಯಕ್ತಿಗಳ ಆರೈಕೆದಾರರಿಗೆ ನೀಡಲಾಗುವ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಅ.30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ (ದೂ.ಸಂ 08226-223688, 224688 ಹಾಗೂ ಚಾಮರಾಜನಗರ ಎಂ.ಆರ್.ಡಬ್ಲ್ಯೂ ರಾಜೇಶ್ (ಮೊ.ಸಂ 8073716208), ಕೊಳ್ಳೇಗಾಲ ಎಂ.ಆರ್.ಡಬ್ಲ್ಯೂ ಕವಿರತ್ನ (ಮೊ.ಸಂ 7892715408), ಗುಂಡ್ಲುಪೇಟೆ ಎಂ.ಆರ್.ಡಬ್ಲ್ಯೂ ಮಂಜುಳಾ (ಮೊ.ಸಂ 9742423332), ಯಳಂದೂರು ಎಂ.ಆರ್.ಡಬ್ಲ್ಯೂ ಮಹದೇವಮ್ಮ (ಮೊ.ಸಂ 9740164149) ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net