ಭೌತಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಅಲ್ಪಸಂಖ್ಯಾತರ ಇಲಾಖೆಯಿಂದ ಗುಂಡ್ಲುಪೇಟೆಯ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಭೌತಶಾಸ್ತ್ರ ಉಪನ್ಯಾಸಕರ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗುಂಡ್ಲುಪೇಟೆಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9964346118 ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.5 ಕೊನೆಯ ದಿನವಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net