ಗ್ರಾಮ ಒನ್ ಕೇಂದ್ರ ತೆರೆಯಲು ಆಹ್ವಾನ

Adarsha Shakshaka Prashasti Application
Published on

ಚಾಮರಾಜನಗರ: ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 130 ಗ್ರಾಮ ಪಂಚಾಯಿತಿಗಳಿಗೆ 196 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು ಈ ಪೈಕಿ 176 ಗ್ರಾಮ ಒನ್ ಕೇಂದ್ರಗಳಿಗೆ ಅನುಮೋದನೆಯಾಗಿದೆ. ಚಾಮರಾಜನಗರ ತಾಲೂಕಿನ ಯರಗನಹಳ್ಳಿ ಗ್ರಾಮ ಪಂಚಾಯಿತಿ, ಮಾದಾಪುರ, ಬಿಸಿಲವಾಡಿ, ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮ ಪಂಚಾಯಿತಿ, ಹನೂರು ತಾಲೂಕಿನ ಬೈಲೂರು ಗ್ರಾಮ ಪಂಚಾಯಿತಿಗಳಲ್ಲಿ ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಿದೆ.

ಅರ್ಜಿಯನ್ನು ವೆಬ್‌ಸೈಟ್ ಮೂಲಕ ಅ.15ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಮೊ: 9148712473 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net